ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಹಾಸನ: ವಿದ್ಯುತ್ ತಂತಿ ತಗಲಿ ...
ಕೋಲಾರ: ಸಾಲಭಾದೆ ತಾಳಲಾರದೆ ...
ಹಾಸನ: ಚಿರತೆಯೊಂದು ಕರುವಿನ ಮೇಲೆ
ಕೊಡಗು: ಈಗ ಬೇಸಿಗೆ ಕಾಲ ಎಲ್ಲರೂ
ಹಾಸನ: ಪುಲ್ವಾಮಾದಲ್ಲಿ ಭಾರತೀಯ ...
ಸಕಲೇಶಪುರ: ಗ್ಯಾಸ್ ಸಿಲಿಂಡರ್ ...
ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ
ಕೊಡಗು: ಅಪರೂಪದ ಎರಡು ತಲೆಯ ...
ತುಮಕೂರು: ಹಲವು ದಿನಗಳಿಂದ ...
ತುಮಕೂರು/ಗುಬ್ಬಿ: ಚಿರತೆ ದಾಳಿಗೆ
ತುಮಕೂರು/ಹೆಬ್ಬೂರು:
ಹಾಸನ: ಅಪಘಾತ ಪ್ರಕರಣಗಳು ...
ಕೋಲಾರ: ಖಚಿತ ‌ಮಾಹಿತಿ ಮೇರೆಗೆ ...
ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ

ಸ್ಥಳೀಯ ಸುದ್ದಿ

ಮಾನವ ಮನುತತ್ವವನ್ನ ಬಿಟ್ಟು ನಡೆದುಕೊಳ್ಳುತ್ತಿದ್ದಾನೆ

ಅರಸಿಕೆರೆ: ಶ್ರೀ ಸಚಿದಾನಂದ ಜ್ಞಾನೇಶ್ವರ ಮಠದ ಪೀಠಾಧ್ಯಕ್ಷರಾದ ಶ್ರೀ ಸಚಿದಾನಂದ ಜ್ಞಾನೇಶ್ವರ ಭಾರತಿ ಶ್ರೀಗಳಿಗೆ ತಾಲ್ಲೂಕು ದೈವಜ್ಞ ಬ್ರಾಹ್ಮಣ ಸಮಾಜದ ವತಿಯಿಂದ ಗುರುಭಕ್ತಿ ಸಮರ್ಪಣೆ ಕಾರ್ಯಕ್ರಮಗಳು ಭ್ತಕ್ತಾಪೂರ್ವಕವಾಗಿ ಬಹಳ ವಿಜೃಂಭಣೆಯಿಂದ ನೆರವೇರಿತು.

ಅರಸೀಕೆರೆ ನಗರಕ್ಕೆ ಪುರಪ್ರವೇಶ ಮಾಡಿದ ಶ್ರೀಗಳಿಗೆ ಮಂಗಳವಾದ್ಯ ಸಮೇತ ಪೂರ್ಣ ಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ನಂತರ ಶೃಂಗರಿಸಿದ ಕುದುರೆ ಸಾರೋಟ್ನಲ್ಲಿ ಸಚಿದಾನಂದ ಜ್ಞಾನೇಶ್ವರ ಭಾರತಿ ಸ್ವಾಮೀಜಿಗಳನ್ನು ಕೂರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ನಂತರ ರಾಮಸ್ವಾಮಿ ಸಭಾ ಭವನದಲ್ಲಿ ಧಾರ್ಮಿಕ ಸಮಾರಂಭ ನಡೆಸಿ ಸಭೆಯ ಸಾನ್ನಿಧ್ಯ ವಹಿಸುವ ಶ್ರೀಗಳು ಭಕ್ತರಿಗೆ ಆಶೀರ್ವಚನ ನೀಡಿ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಅತ್ಯುನ್ನತ ಸ್ಥಾನ ಹೊಂದಿರೋ ಭಾರತೀಯ ಸಂಸ್ಕೃತಿಯ ಉತ್ಕೃಷ್ಟತೆಯನ್ನ ತಿಳಿಯದೆ ಇಂದಿನ ಆಧುನಿಕ ಜೀವನ ಶೈಲಿಗೆ ಮಾರುಹೋಗಿರೋ ಮಾನವ ಮನುತತ್ವವನ್ನ ಬಿಟ್ಟು ನಡೆದುಕೊಳ್ಳುತ್ತಿದ್ದಾನೆ. ಮಾನವೀಯ ಮೌಲ್ಯಗಳನ್ನು ಅರಿಯದೆ, ಆಧ್ಯಾತ್ಮಿಕ ಭಾವದಿಂದ ದೂರ ಸರಿದು, ಜೀವನದ ಸಾರ್ಥಕತೆಯನ್ನು ಕಳೆದುಕೊಳುತ್ತಿದ್ದಾನೆ ಎಂದರು. ಶ್ರೀ ಆದಿಶಂಕರಾಚಾರ್ಯರು ಸಾರಿರುವ ಧರ್ಮ ಸಂದೇಶವನ್ನು ನಾವು ಅರಿತು ಅದನ್ನು ಪಾಲನೆ ಮಾಡುತ್ತಾ ಜೀವನ ಸಾಗಿಸಿದಾಗ ಮಾತ್ರ ಜೀವನದಲ್ಲಿ ಮೋಕ್ಷ ಪಡೆಯಲು ಸಾದ್ಯ. ಸನಾತನ ಸಂಸ್ಕೃತಿಯ ಉಳಿವಿಗಾಗಿ ನಾವೆಲ್ಲಾ ಸಂಕಲ್ಪ ಮಾಡಿ ಭಗವಂತನಿಗೆ ಶರಣಾಗಿ ನಮ್ಮ ಜೀವನದಲ್ಲಿ ಕೃತಜ್ಞತಾ ಭಾವ ಕಾಣೋಣಾ, ನಮ್ಮ ಮುಂದಿನ ಪೀಳಿಗೆ ಏಳಿಗೆಯ ಶ್ರೇಯೋಭಿವೃದ್ದಿಯ ದೃಷ್ಟಿಯಿಂದ ನಮ್ಮ ಆಚಾರ ವಿಚಾರಗಳನ್ನು ಅವರು ಅನುಸರಿಸುವ ನಿಟ್ಟಿನಲ್ಲಿ ನಾವು ನಡೆದುಕೊಳ್ಳಬೇಕಿದೆ ಎಂದು ಧರ್ಮ ಸೂಕ್ಷ್ಮತೆಯನ್ನು ವಿವರಿಸಿದರು.

ಈ ಸಂದರ್ಭದಲ್ಲಿ ದೈವಜ್ಞ ಬ್ರಾಹ್ಮಣ ಸಮಾಜದ ಅಧ್ಯಕ್ಷರಾದ ರತ್ನಾಕರ್ ಸೇಟ್. ಶಾಸಕ ಕೆ.ಎಂ ಶಿವಲಿಂಗೇಗೌಡ, ಮಾಜಿ ಶಾಸಕರುಗಳಾದ ಎ.ಎಸ್ ಬಸವರಾಜು, ಪರಮೇಶ್ವರಪ್ಪ,  ಮುಖಂಡರುಗಳಾದ ಗಣೇಶ್, ನಾಗೇಂದ್ರ, ಮಂಜುನಾಥ್, ಬ್ರಾಹ್ಮಣ ಸಂಘದ ಅಧ್ಯಕ್ಷ ರಮೇಶ್, ವಿಪ್ರ ಮಂಜುನಾಥ್, ಟಿ.ಆರ್ ನಾಗರಾಜ್, ಮತ್ತಿತರ ಚುನಾಯಿತ ಜನಪ್ರತಿನಿಧಿಗಳು ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದು, ದೈವಜ್ಞ ಬ್ರಾಹ್ಮಣ ಸಮಾಜ ಬಾಂಧವರು ಸೇರಿದಂತೆ ನಾನಾ ಸಮಾಜ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಪರಮಪೂಜ್ಯರ ಕೃಪೆಗೆ ಪಾತ್ರರಾದರು. ನೆರದಿದ್ದ ಸಕಲ ಭಕ್ತರೂ ಸರತಿ ಸಾಲಿನಲ್ಲಿ ಬಂದು ಶ್ರೀಗಳವರಿಂದ ಫಲಮಂತ್ರಾಕ್ಷತೆ ಸ್ವೀಕರಿಸಿ, ಆಶೀರ್ವಾದ ಪಡೆದರು.

- ಪ್ರಸಾದ್ ಮುರುಂಡಿ, ಅರಸೀಕೆರೆ.

Last modified on Wednesday, 20 November 2019 18:12
Share this article

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Feb 17, 2020
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Sep 09, 2019
ಹಾಸನ: ಕೋಮುವಾದಿ ಪಕ್ಷದ ವಿಷಜಂತುವಾಗಿರುವ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಪತ್ರಿಕೆ, ಅಚ್ಚುಮೊಳೆ ಜೋಡಿಸಿ ಮುದ್ರಣ, ಗಣಕೀಕೃತ ಪತ್ರಿಕೆ, ಮುದ್ರಣ ಮಾಧ್ಯಮ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂಬಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ಪತ್ರಕರ್ತರೇ ಕಟ್ಟಿರುವ ಈ ಸುದ್ದಿ ವಾಹಿನಿಯನ್ನು ತಾವು ಬೆಳೆಸುತ್ತಿರಾ. . ? ಹರಸುತ್ತಿರಾ. . . ? ಕೈ ಹಿಡಿಯುತ್ತೀರಾ. . ? ಎಂಬ ನಂಬಿಕೆ ನಮ್ಮದು. www.kondinews.com ಕ್ಲಿಕ್ ಮಾಡಿ, ಲೈಕ್ ಮಾಡಿ. . .  ಶೇರ್ ಮಾಡಿ. . . ಸಬ್ಸ್ಕ್ರೈಬ್ ಮಾಡಿರಿ.. . 

ಸಂಪಾದಕ, ಕೊಂಡಿನ್ಯೂಸ್.

Newsletter

Subscribe with us your email
Top