ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ...
ಕೋಲಾರ : ಇಡೀ ಜಗತ್ತನ್ನೇ ...
ಹಾಸನ: ಕೋವಿಡ್-19 ತಡೆಗಟ್ಟುವ ...
ಹಾಸನ: ಕೋವಿಡ್-19 ಬಗ್ಗೆ ಯಾವುದೇ
ಅರಸೀಕೆರೆ: ಸಂಕಷ್ಟದಲ್ಲಿರುವ ...
ಹಾಸನ:ಜಿಲ್ಲೆಯಲ್ಲಿ ಹೊಸದಾಗಿ 15
ಹಾಸನ: ಕೋವಿಡ್-19 ಸೋಂಕು ...
ಹಾಸನ.ಮೇ.30.(ಕರ್ನಾಟಕ ವಾರ್ತೆ):-
ಹಾಸನ: ಉದ್ಯೋಗ ಖಾತರಿ ಯೋಜನೆಯಡಿ
ಹಾಸನ: ಮುಂಬೈನಿಂದ ಹಾಸನಕ್ಕೆ ...
ಹಾಸನ: ಈಯಮ್ಮನ ಹತ್ರ ಮತ್ತು ...
ಸೋಮವಾರಪೇಟೆ: ತಾಲ್ಲೂಕಿನ ಯಡವನಾಡು
ಹಾಸನ: ಹೊರಗಡೆಯಿಂದ ಬಂದವರನ್ನು ...
ಹಾಸವ: ಹಾಸನದಲ್ಲಿ ದಿನದಿಂದ ...
ಹಾಸನ: ಹಾಸನದಲ್ಲಿ ಬೆಳಗ್ಗೆ ...
ಹಾಸನ: ಒಂದು ಕಡೆ ಲಾಕ್ಡೌನ್ ಓಪನ್
ಮಂಡ್ಯ:ರಾತ್ರಿ ವೇಳೆ ದಿಢೀರ್ ...
ತುಮಕೂರು : ಸಾರ್ವಜನಿಕರಿಗೆ ಭೀತಿ
×

Warning

JUser: :_load: Unable to load user with ID: 240
ಆಹಾರಧಾನ್ಯ ವಿತರಣೆ ವಿಳಂಬ ಗ್ರಾಹಕರ ಮೇಲೆಯೇ ದೌರ್ಜನ್ಯ

ಹಾಸನ: ನ್ಯಾಯಬೆಲೆ ಅಂಗಡಿಗಳಲ್ಲಿ ಮಾಲಿಕರು ಸರಿಯಾಗಿ ಆಹಾರಧಾನ್ಯ ವಿತರಣೆ ಮಾಡದೇ ಜನಸಾಮಾನ್ಯರಿಗೆ ವಂಚಿಸುತ್ತಿದ್ದಾರೆಂದು ಆರೋಪಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಹಾರ ನಿರೀಕ್ಷಕರಿಗೆ ತರಾಟೆಗೆ ತೆಗೆದುಕೊಂಡರು ಘಟನೆ ಆಲೂರು ತಾಲೂಕಿನಲ್ಲಿ ನಡೆದಿದೆ. 

ಆಲೂರು ತಾಲ್ಲೂಕಿನ ಕಾಮತಿ ಕೂಡುಗೆ ನ್ಯಾಯಬೆಲೆ ಅಂಗಡಿಯಲ್ಲಿ ಸುಮಾರು 650 ಬಿಪಿಎಲ್ ಕುಟುಂಬಗಳಿಂದ್ದು, ಕಾಂತಿಶೆಟ್ಟಿ ಹಳ್ಳಿ, ಕಲ್ಕೆರೆ ಹುಣಸೆ ಲಕ್ಕಮನಹಳ್ಳಿ, ದೇವರಾಜಪುರ ಗ್ರಾಮ ಸೇರಿದಂತೆ ಹಲವು ಗ್ರಾಮಗಳು ಈ ನ್ಯಾಯಬೆಲೆ ಅಂಗಡಿಗೆ ಸೇರಿದ್ದು. ತೂಕದಲ್ಲಿಯೂ ಮೋಸ ಮಾಡುತ್ತಿದ್ದು ಗ್ರಾಹಕರು ಈ ಬಗ್ಗೆ ಕೇಳಿದರೆ ಗ್ರಾಹಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಇಂದು ಗ್ರಾಹಕರು ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಆಹಾರ ನಿರೀಕ್ಷಕಿಗೆ ತೀವ್ರ ತರಾಟೆಗೆ ತೆಗೆದುಕೊಂಡರು.   

ನ್ಯಾಯಬೆಲೆ ಅಂಗಡಿ ಮಾಲೀಕರಾದ ಶಿವಪ್ಪ ಅವರು ಹಾಸನದಲ್ಲಿ ವಾಸವಿದ್ದು ಇವರು ಎಂ.ಸಿ.ಎಫ್.ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಶಿವಪ್ಪ ಅವರು ತನ್ನ ಅಧಿಕಾರ ಬಳಸಿ ತನ್ನ ಹೆಂಡತಿ ವೇದಾವತಿಯ ಹೆಸರಿನಲ್ಲಿ ನ್ಯಾಯ ಬೆಲೆ ಅಂಗಡಿ ನಡೆಸುತ್ತಿದ್ದಾರೆ. ಇವರು ತಿಂಗಳಿಗೆ 2 ದಿವಸ ಮಾತ್ರ ಅಂಗಡಿ ತೆರದು ಹೆಬ್ಬೆಟ್ಟು (ತ೦ಬು) ಪಡೆಯುವ ನೆಪದಲ್ಲಿ ಒಂದು ಕಾರ್ಡಿಗೆ 10 ರೂ ಹಣ ಪಡೆಯುತ್ತಾರೆ  ನಮಗೆ ಆಹಾರ ಧಾನ್ಯ ವಿತರಣೆ ಮಾಡುವಾಗ ತೂಕದಲ್ಲಿ ಮೋಸ ಮಾಡಿ ನಮಗೆ ವಂಚಿಸುತ್ತಿದ್ದು ನಾವುಗಳು ಈ ಬಗ್ಗೆ ಪ್ರಶ್ನೆ ಮಾಡಿದರೆ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ ಎಂಬುದು ನೊಂದ ಗ್ರಾಹಕರ ಆರೋಪ. 

ಆಲೂರು ಭಾಗದಲ್ಲಿ ಬಹುತೇಕ ಕೂಲಿ ಕಾರ್ಮಿಕರೇ ಹೆಚ್ಚು. ದಿನಗೂಲಿ ಮಾಡಿ ಜೀವನ ನಡೆಸಬೇಕಾದ ಅನಿವಾರ್ಯತೆ ಇದೆ ಅದರೆ ನ್ಯಾಯಬೆಲೆ ಅಂಗಡಿ ಮಾಲೀಕರು ಕೇವಲ 2 ದಿವಸ ಆಹಾರ ಧಾನ್ಯ ವಿತರಣೆ ಮಾಡಿದರೆ ಸಾಲದು. ಕೂಲಿ ಕೆಲಸ ಬಿಟ್ಟು ತಿಂಗಳಲ್ಲಿ ಐದಾರು ಬಾರಿ ಪಡಿತರ ಆಹಾರಕ್ಕಾಗಿ ನ್ಯಾಯಬೆಲೆ ಅಂಗಡಿ ಮುಂದೆ ಕಾಯ್ದು ಕುಳಿತರೆ ಜೀವನ ನಡೆಸುವುದು ಹೇಗೆ ಸಾಧ್ಯ..? ಈ ಬಗ್ಗೆ ಹಲವು ಬಾರಿ ತಾಲ್ಲೂಕು ಕಚೇರಿಗೆ ದೂರು ನೀಡಿದ್ದು, ಸಂಪೂರ್ಣವಾಗಿ ಮಾಹಿತಿ ನೀಡಿದರೂ ಇದುವರೆಗೂ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಬಂಧಪಟ್ಟ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಂಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿ, ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಂಡು ನಮಗೆ ನ್ಯಾಯ ಒದಗಿಸಿಕೊಡಬೇಕು ಇಲ್ಲಾ ಕಲ್ಕೆರೆ ಗ್ರಾಮಗಳಿಗೆ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಬೇಕೆಂದು ಆಗ್ರಹಿಸಿದರು.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Jun 02, 2020
ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- May 21, 2020
ಬೆಂಗಳೂರು: ಕ್ವಾರಂಟೈನ್​ನಲ್ಲಿ ಟ್ರೆಂಡಿಂಗ್​ನಲ್ಲಿರುವ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Visitors Counter

01055440
Today
This Month
Last Month
All days
122
761
2198
1055440
Your IP: 34.231.21.83
2020-06-04 15:30

Newsletter

Subscribe with us your email
Top