ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ...
ಕೋಲಾರ : ಇಡೀ ಜಗತ್ತನ್ನೇ ...
ಹಾಸನ: ಕೋವಿಡ್-19 ತಡೆಗಟ್ಟುವ ...
ಹಾಸನ: ಕೋವಿಡ್-19 ಬಗ್ಗೆ ಯಾವುದೇ
ಅರಸೀಕೆರೆ: ಸಂಕಷ್ಟದಲ್ಲಿರುವ ...
ಹಾಸನ:ಜಿಲ್ಲೆಯಲ್ಲಿ ಹೊಸದಾಗಿ 15
ಹಾಸನ: ಕೋವಿಡ್-19 ಸೋಂಕು ...
ಹಾಸನ.ಮೇ.30.(ಕರ್ನಾಟಕ ವಾರ್ತೆ):-
ಹಾಸನ: ಉದ್ಯೋಗ ಖಾತರಿ ಯೋಜನೆಯಡಿ
ಹಾಸನ: ಮುಂಬೈನಿಂದ ಹಾಸನಕ್ಕೆ ...
ಹಾಸನ: ಈಯಮ್ಮನ ಹತ್ರ ಮತ್ತು ...
ಸೋಮವಾರಪೇಟೆ: ತಾಲ್ಲೂಕಿನ ಯಡವನಾಡು
ಹಾಸನ: ಹೊರಗಡೆಯಿಂದ ಬಂದವರನ್ನು ...
ಹಾಸವ: ಹಾಸನದಲ್ಲಿ ದಿನದಿಂದ ...
ಹಾಸನ: ಹಾಸನದಲ್ಲಿ ಬೆಳಗ್ಗೆ ...
ಹಾಸನ: ಒಂದು ಕಡೆ ಲಾಕ್ಡೌನ್ ಓಪನ್
ಮಂಡ್ಯ:ರಾತ್ರಿ ವೇಳೆ ದಿಢೀರ್ ...
ತುಮಕೂರು : ಸಾರ್ವಜನಿಕರಿಗೆ ಭೀತಿ
ವಿದ್ಯೆ ಕಲಿಸುವ ಗುರುವೇ ವಿದ್ಯೆಯನ್ನು ಹಣಕ್ಕೆ ಖರೀದಿಸಿದ:   ಹಾಸನ ಜಿಲ್ಲೆ ಚನ್ನರಾಯಪಟ್ಟಣದಲ್ಲೊಬ್ಬ  ಶಿಕ್ಷಣವನ್ನೇ ಖರೀದಿಸಿದ ಶಿಕ್ಷಕ.

ಹಾಸನ: ಹಣ, ಚಿನ್ನ ಎಲ್ಲವನ್ನ ಕದಿಯಬಹುದು. ಆದ್ರೆ ವಿದ್ಯೆ ಕದಿಯಲಾರದ ಸಂಪತ್ತು. ಎಂಬ ಗಾದೆ ಮಾತು ಎಲ್ಲರಿಗೂ ಗೊತ್ತಿದೆ. ಆದ್ರೆ ವಿದ್ಯೆ ಕಲಿಸುವ ಗುರುವೇ ವಿದ್ಯೆಯನ್ನ ಹಣಕ್ಕೆ ಖರೀದಿಸಿ ಸರ್ಕಾರಿ ಕೆಲ್ಸ ಗಿಟ್ಟಿಸಿಕೊಂಡಿರೋ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಹೌದು, ಇಂತಹದೊಂದು ಪ್ರಕರಣ ಬೆಳಕಿಗೆ ಬಂದಿರೋದು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನಲ್ಲಿ. ಪ್ರಕರಣವನ್ನ ಹೊರಕ್ಕೆ ತಂದಿರೋದು ಮಾತ್ರ ಹೊಳೆನರಸೀಪುರದ ಮತ್ತೊಬ್ಬ ಶಿಕ್ಷಕ. ಅಷ್ಟಕ್ಕೂ ಏನಿದು ಪ್ರಕರಣ ಅಂತೀರಾ ಈ ಸ್ಟೋರಿ ನೋಡಿ...

ಈ ಪೋಟೋದಲ್ಲಿ ಕಾಣುತ್ತಿರುವವರ ಹೆಸರು ಜಿ.ಪಿ.ಧರ್ಮೇಗೌಡ ಅಂತ. ಸದ್ಯ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಅಲ್ಪಸಂಖ್ಯಾಂತರ ಮೂರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸದ್ಯ ಸೇವೆ ಸಲ್ಲಿಸುತ್ತಿದ್ದಾರೆ. ಇದಕ್ಕೂ ಮುನ್ನ ಇವರು ಅಂದ್ರೆ 2011-2018ರ ತನಕ ಉಪನ್ಯಾಸಕ ವೃತ್ತಿಯನ್ನ ಮಾಡುತ್ತಿದ್ದು, 2011-2018ರ ತನಕ ಅರಕಲಗೂಡು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು 2011-2013ರ ತನಕ ಗೊರೂರಿನ ಎ.ಎನ್.ವರದರಾಜು ಕಾಲೇಜುಗಳಲ್ಲಿ ಅರ್ಥಶಾಸ್ತ್ರ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದಾರೆ.

ಈ ಮಧ್ಯೆ 2013-14 ರಲ್ಲಿ ಇವರು ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಬಿ.ಇಡಿ ಮಾಡಿದ್ದು, 2017-2018ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಲ್ಲಿ ನಡೆದ ಉಪನ್ಯಾಸಕರ ನೇಮಕಾತಿಯಲ್ಲಿ ಆಯ್ಕೆಯಾಗಿದ್ದು, 2018ರಲ್ಲಿ ಚನ್ನರಾಯಪಟ್ಟಣದ ಮೂರಾರ್ಜಿ ದೇಸಾಯಿ ಬಾಲಕಿಯರ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಸೇವೆ ಆರಂಭಿಸಿದ್ದಾರೆ. ಆದ್ರೆ ಈ ಮಧ್ಯೆ ಇವರು 2013ರಲ್ಲಿ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಕಾನೂನು ಬಾಹಿರವಾಗಿ ಬಿ.ಇಡಿ ಪದವಿ ಪಡೆಯುವುದರ ಜೊತೆಗೆ ನಕಲಿ ಅಂಕಪಟ್ಟಿಯನ್ನ ಪಡೆದು ಸರ್ಕಾರಿ ಸೇವೆಗೆ ಸೇರಿದ್ದಾರೆಂಬ ಆರೋಪ ಕೇಳಿಬಂದಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ಉಪನ್ಯಾಸಕರ ಹುದ್ದೆಗೆ ಬಿ.ಇಡಿ ಕಡ್ಡಾಯ ಮಾಡಿರುವುದರ ಹಿನ್ನಲೆಯಲ್ಲಿ ಅನುದಾನ ಮತ್ತು ಅನುದಾನರಹಿತ ಕಾಲೇಜಿನಲ್ಲಿ ಸೇವೆಸಲ್ಲಿಸಿ ಜೊತೆಗೆ ಸ್ನಾತಕೋತ್ತರ ಪದವಿ ಪಡೆದು ಉಪನ್ಯಾಸಕ ವೃತ್ತಿ ಮಾಡ್ತಾ, ಸಂಬಳದ ಜೊತೆಗೆ ಪಿಂಚಣಿ ಹಣವನ್ನ ಪಡೆದು ಪೂರ್ಣಕಾಲಿಕ ಹುದ್ದೆಯಲ್ಲಿದ್ದು, ಸರ್ಕಾರಿ ಸೇವೆ ಪಡೆಯಲು ಬೆಂಗಳೂರು ವಿಶ್ವವಿದ್ಯಾಲಯದಿಂದ ಕಾನೂನು ಬಾಹಿರವಾಗಿ ಪದವಿ ಪಡೆದಿರುವುದು ಮಾಹಿತಿ ಹಕ್ಕು ಕಾಯ್ದೆಯಡಿ ಗೊತ್ತಾಗಿದ್ದು, ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಕಾನೂನಾತ್ಮಕ ಕ್ರಮ ಜರುಗಿಸಲು ಮುಂದಾಗಿದೆ. ಇನ್ನು ಮಾಹಿತಿ ಹಕ್ಕು ಕಾಯ್ದೆಯಡಿ ದಾಖಲಾತಿ ಪಡೆದಿರೋ ವಿಷ್ಣು ಹೆಚ್ .ಆರ್. ಸದ್ಯ ಪದವಿ ಶಿಕ್ಷಣ ಇಲಾಖೆಯ ಉಪನಿರ್ಧೇಕರಿಗೆ, ಜಿಲ್ಲಾಪಂಚಾಯತಿ, ಹಾಸನ ಜಿಲ್ಲಾಧಿಕಾರಿ ಸೇರಿದಂತೆ ಸಂಬಂಧಪಟ್ಟ ಇಲಾಖೆಗೆ ದೂರು ನೀಡಿದ್ದಾರೆ. ಇನ್ನು ಇದ್ರ ಬಗ್ಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯದರ್ಶಿಯವರು ಉಪನ್ಯಾಸಕ ಜಿ.ಪಿ.ಧರ್ಮೇಗೌಡರವರಿಗೆ ನೋಟೀಸ್ ನೀಡಿದ್ದು, ಧರ್ಮೇಗೌಡ ನೋಟೀಸ್ ಗೂ ಉತ್ತರ ನೀಡಿಲ್ಲವಂತೆ.

ಒಟ್ಟಾರೆ, ವಿದ್ಯೆಯನ್ನ ಕದಿಯಲಾರದ ಸಂಪತ್ತು ಎನ್ನುವ ಮಾತು ಇತ್ತೀಚಿನ ದಿನದಲ್ಲಿ ದೂರವಾಗುತ್ತಿದ್ದು, ಕಾನೂನು ಬಾಹಿರವಾಗಿ ಪದವಿ ಪಡೆದು ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿರೋ ಧರ್ಮೇಗೌಡರಂತಹವರಿಂದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳ ಬದುಕು ಮೂರಾಬಟ್ಟೆಯಾಗುತ್ತಿದ್ದು, ಇಂತಹವರ ವಿರುದ್ದ ಸರ್ಕಾರ ಯಾವ ರೀತಿಯ ಕ್ರಮ ಜರುಗಿಸುತ್ತೆ ಎಂಬುದನ್ನ ಕಾದುನೋಡಬೇಕಿದೆ.

Last modified on Wednesday, 06 November 2019 22:16
Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Jun 02, 2020
ಕೋಲಾರ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Mar 28, 2020
ನವದೆಹಲಿ: ಹೆಮ್ಮಾರಿ ಕೊರೊನಾ ವಿಶ್ವದಾದ್ಯಂತ ರೌದ್ರನರ್ತನ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Visitors Counter

01055495
Today
This Month
Last Month
All days
177
816
2198
1055495
Your IP: 34.231.21.83
2020-06-04 17:44

Newsletter

Subscribe with us your email
Top