ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಹಾಸನ: ವಿದ್ಯುತ್ ತಂತಿ ತಗಲಿ ...
ಕೋಲಾರ: ಸಾಲಭಾದೆ ತಾಳಲಾರದೆ ...
ಹಾಸನ: ಚಿರತೆಯೊಂದು ಕರುವಿನ ಮೇಲೆ
ಕೊಡಗು: ಈಗ ಬೇಸಿಗೆ ಕಾಲ ಎಲ್ಲರೂ
ಹಾಸನ: ಪುಲ್ವಾಮಾದಲ್ಲಿ ಭಾರತೀಯ ...
ಸಕಲೇಶಪುರ: ಗ್ಯಾಸ್ ಸಿಲಿಂಡರ್ ...
ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ
ಕೊಡಗು: ಅಪರೂಪದ ಎರಡು ತಲೆಯ ...
ತುಮಕೂರು: ಹಲವು ದಿನಗಳಿಂದ ...
ತುಮಕೂರು/ಗುಬ್ಬಿ: ಚಿರತೆ ದಾಳಿಗೆ
ತುಮಕೂರು/ಹೆಬ್ಬೂರು:
ಹಾಸನ: ಅಪಘಾತ ಪ್ರಕರಣಗಳು ...
ಕೋಲಾರ: ಖಚಿತ ‌ಮಾಹಿತಿ ಮೇರೆಗೆ ...
ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ
ಬಂಡಾಯ ಕಾಂಗ್ರೇಸ್ ಮತ್ತು ಬಿಜೆಪಿಗೆ ಭಾರಿ ಜಯ
ಹಾಸನ: ಕುತೂಹಲ ಕೆರಳಿಸಿದ್ದ ದೇಶಾಣೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಸಾಲಗಾರರ ಕ್ಷೇತ್ರದಿಂದ 11 ಮಂದಿ ನಿರ್ದೇಶಕರ ಜಯಗಳಿಸುವ ಮೂಲಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಮುಖಭಂಗ ಮಾಡಿದ್ದಾರೆ.
 
ಹೌದು ಇದು ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ದೇಶಾಣೆ ಗ್ರಾಮ.  ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆ ಜನವರಿ 22ರಂದು ನಡೆದಿತ್ತು.  ಜಿಲ್ಲಾ ಪಂಚಾಯತಿಯ ಅಧ್ಯಕ್ಷರಾಗಿರುವ ಕಾಂಗ್ರೆಸ್ ನ ಶ್ವೇತಾ ದೇವರಾಜ್ ಮತ್ತು ಇವರ ವಿರುದ್ಧ ದನಿಯೆತ್ತಿರುವ ಬಂಡಾಯ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಹಣಾಹಣಿ ನಡೆದಿತ್ತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಲು ಸಹಕರಿಸಿದ ಜೆಡಿಎಸ್ ಹಾಗೂ ಕಾಂಗ್ರೆಸ್ ಮುಖಂಡರುಗಳನ್ನು ಕಡೆಗಣಿಸಿ ಚುನಾವಣೆ ಮಾಡಲು ಶ್ವೇತಾ ದೇವರಾಜ್ ಮುಂದಾಗಿದ್ದು, ಕೇವಲ 1 ಸ್ಥಾನ ಪಡೆಯುವ ಮೂಲಕ ಚುನಾವಣೆಯಲ್ಲಿ ಭಾರಿ ಮುಖಭಂಗ ಅನುಭವಿಸಿದ್ದಾರೆ.
 
ಮೊದಲೇ ಸಹಕಾರ ಸಂಘದ ಆರ್ಥಿಕ ಸ್ಥಿತಿಯನ್ನು ಕುಸಿದಿತ್ತು ಇದರ ನಡುವೆ ಚುನಾವಣೆ ಬೇಡ ಎಂಬುದು ನಮ್ಮ ಬೇಡಿಕೆ ಆಗಿತ್ತು ಆದರೆ ಇವೆಲ್ಲವನ್ನು ಬದಿಗೊತ್ತಿ ಚುನಾವಣೆ ಮಾಡಬೇಕೆಂದು ಪಟ್ಟು ಹಿಡಿದಿದ್ದರಿಂದ ಮಾಡಬೇಕಾಗಿತ್ತು. ಪ್ರತಿ ಚುನಾವಣೆಯಲ್ಲೂ ನಡೆದಾಗ ಲಕ್ಷ ಲಕ್ಷ ರೂ ಖರ್ಚಾಗುತ್ತದೆ ಖರ್ಚನ್ನು ನಿಭಾಯಿಸಲು ಸಾಧ್ಯವಾಗದೆ ಅವಿರೋಧವಾಗಿ ಆಯ್ಕೆ ಮಾಡುತ್ತಾರೆ  ಬಂದಿದ್ದ ಸಹಕಾರ ಸಂಘಕ್ಕೆ ಚುನಾವಣೆ ಎದುರಾದಾಗ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟು,  ಅವರ ವಿರುದ್ಧದ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಸದಸ್ಯರು ಒಟ್ಟಾಗಿ ಚುನಾವಣೆ ಎದುರಿಸಿ ಸಾಲಗಾರರ ಕ್ಷೇತ್ರದ ಚುನಾವಣೆಯಲ್ಲಿ 11 ಗೆಲುವು ಸಾಧಿಸಿದ್ದೇವೆ. 
 
ಅಲ್ಲದೆ ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಸಾಮಾಜಿಕ ನ್ಯಾಯದ ಅಡಿಯಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ ಆಗಿದ್ದು ನಮಗೆ ಖುಷಿ ತಂದಿದೆ. ಅಲ್ಲದೇ ಸ್ವಕ್ಷೇತ್ರ ಮತ್ತು ಮತ್ತು ಸಹಕಾರ ಸಂಘವನ್ನು ಅಭಿವೃದ್ಧಿ ಮಾಡದ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅಷ್ಟೇ ಸತ್ಯ.
 
ಕೊಂಡಿನ್ಯೂಸ್, ಹಾಸನ.
Last modified on Tuesday, 11 February 2020 19:20
Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Feb 17, 2020
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Sep 09, 2019
ಹಾಸನ: ಕೋಮುವಾದಿ ಪಕ್ಷದ ವಿಷಜಂತುವಾಗಿರುವ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಪತ್ರಿಕೆ, ಅಚ್ಚುಮೊಳೆ ಜೋಡಿಸಿ ಮುದ್ರಣ, ಗಣಕೀಕೃತ ಪತ್ರಿಕೆ, ಮುದ್ರಣ ಮಾಧ್ಯಮ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂಬಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ಪತ್ರಕರ್ತರೇ ಕಟ್ಟಿರುವ ಈ ಸುದ್ದಿ ವಾಹಿನಿಯನ್ನು ತಾವು ಬೆಳೆಸುತ್ತಿರಾ. . ? ಹರಸುತ್ತಿರಾ. . . ? ಕೈ ಹಿಡಿಯುತ್ತೀರಾ. . ? ಎಂಬ ನಂಬಿಕೆ ನಮ್ಮದು. www.kondinews.com ಕ್ಲಿಕ್ ಮಾಡಿ, ಲೈಕ್ ಮಾಡಿ. . .  ಶೇರ್ ಮಾಡಿ. . . ಸಬ್ಸ್ಕ್ರೈಬ್ ಮಾಡಿರಿ.. . 

ಸಂಪಾದಕ, ಕೊಂಡಿನ್ಯೂಸ್.

Newsletter

Subscribe with us your email
Top