ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಹಾಸನ: ವಿದ್ಯುತ್ ತಂತಿ ತಗಲಿ ...
ಕೋಲಾರ: ಸಾಲಭಾದೆ ತಾಳಲಾರದೆ ...
ಹಾಸನ: ಚಿರತೆಯೊಂದು ಕರುವಿನ ಮೇಲೆ
ಕೊಡಗು: ಈಗ ಬೇಸಿಗೆ ಕಾಲ ಎಲ್ಲರೂ
ಹಾಸನ: ಪುಲ್ವಾಮಾದಲ್ಲಿ ಭಾರತೀಯ ...
ಸಕಲೇಶಪುರ: ಗ್ಯಾಸ್ ಸಿಲಿಂಡರ್ ...
ಕೊಡಗು: ಜಿಲ್ಲೆಯಲ್ಲಿ ಹುಲಿ ದಾಳಿ
ಕೊಡಗು: ಅಪರೂಪದ ಎರಡು ತಲೆಯ ...
ತುಮಕೂರು: ಹಲವು ದಿನಗಳಿಂದ ...
ತುಮಕೂರು/ಗುಬ್ಬಿ: ಚಿರತೆ ದಾಳಿಗೆ
ತುಮಕೂರು/ಹೆಬ್ಬೂರು:
ಹಾಸನ: ಅಪಘಾತ ಪ್ರಕರಣಗಳು ...
ಕೋಲಾರ: ಖಚಿತ ‌ಮಾಹಿತಿ ಮೇರೆಗೆ ...
ಹಾಸನ: ಮಾಜಿ ಸಚಿವ ಎಚ್.ಡಿ.ರೇವಣ್ಣ
: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ 15-20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲು..

ಸಕಲೇಶಪುರ: ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆಯಲ್ಲಿ 15-20 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿದ್ದು, ಬೇಕರಿ ಕಟ್ಟಡ ಛಿದ್ರಗೊಂಡಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ.

ಸಕಲೇಶಪುರ ಪಟ್ಟಣದ ಹೃದಯ ಭಾಗದಲ್ಲಿರುವ ಪುರಸಭಾ ಕಚೇರಿಗೆ ಹೊಂದಿಕೊಂಡಂತಿರುವ ಐಯ್ಯಂಗಾರ್ ಬೇಕರಿಯಲ್ಲಿ ಇಂದು ಸಿಲಿಂಡರ್ ಸ್ಫೋಟಗೊಂಡ ಹಿನ್ನೆಲೆ ಬೇಕರಿ ಸಂಪೂರ್ಣ ಸುಟ್ಟು ಕರಕಲಾಗಿದೆ.

ರಮೇಶ್ ಎಂಬವರ ಮಾಲೀಕತ್ವದ ಅಯ್ಯಂಗಾರ್ ಬೇಕರಿಯಲ್ಲಿ ಸಿಲಿಂಡರ್ ಸೋರಿಕೆ ಆಗುತ್ತಿದ್ದು, ಸೋರಿಕೆಯನ್ನು ತಡೆಗಟ್ಟುವರಲ್ಲಿ ಬೇಕರಿ ಮಾಲೀಕರು ಮತ್ತು ಕೆಲಸಗಾರರು ಪ್ರಯತ್ನಪಟ್ಟಿದ್ದಾರೆ. ಆದ್ರೆ ಸೋರಿಕೆ ಹೆಚ್ಚಾಗಿ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಪೋಟಗೊಂಡ ತೀವ್ರತೆಗೆ ಬೇಕರಿಯ ಕಟ್ಟಡ ಛಿಧ್ರಗೊಂಡಿದ್ದು, ಪಕ್ಕದಲ್ಲಿದ್ದ ಸೂಪರ್ ಬಜಾರ್, ವಿಜಯ ಬ್ಯಾಂಕ್, ಶಿಲ್ಪ ಬೇಕರಿ, ಹಾಗೂ ಪುರಸಭಾ ಕಚೇರಿಗೂ ಸಾಕಷ್ಟು ಪ್ರಮಾಣದ ಹಾನಿಯಾಗಿದೆ.

ರಮೇಶ್ ಒಡೆತನದ ಸಿಹಿ ತಯಾರಿಕಾ ಅಂಗಡಿಯಲ್ಲಿ ಸುಮಾರು 15 ಲಕ್ಷ ಮೌಲ್ಯದ ಯಂತ್ರೋಪಕರಣಗಳು ಸ್ಟೋಟಗೊಂಡಿದ್ದರಿಂದ ಸುಟ್ಟು ಕರಕಲಾಗಿದೆ. ಸ್ಪೋಟಗೊಂಡು 20 ನಿಮಿಷವಾದ ಬಳಿಕ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯವನ್ನ ಮಾಡುತ್ತಿದ್ದು, ಕೇವಲ ಒಂದು ಅಗ್ನಿಶಾಮಕದಳ ವಾಹನ ಇದ್ದದ್ದರಿಂದ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದ್ದರಿಂದ ಬೇಲೂರಿನಿಂದ ಮತ್ತೊಂದು ವಾಹನವನ್ನು ಕರೆಸಿಕೊಂಡು ಬೆಂಕಿ ನಂದಿಸುವ ಕಾರ್ಯವನ್ನು ಮಾಡಲಾಗುತ್ತಿದೆ.

ಇನ್ನು ಸ್ಫೋಟಗೊಂಡ ಹಿನ್ನೆಲೆಯಲ್ಲಿ ಸಂಚಾರ ಕೂಡ ಅಸ್ತವ್ಯಸ್ತವಾಗಿದ್ದು, ಹಾಸನ-ಮಂಗಳೂರು ನಡುವಿನ ರಸ್ತೆಯಲ್ಲಿ ವಾಹನಗಳು ಕಿಲೋಮೀಟರ್ ಗಟ್ಟಲೆ ನಿಂತಿದ್ದು ಸಂಚಾರ ದಟ್ಟಣೆಯನ್ನ ಸರಿಪಡಿಸಲು ಸ್ಥಳೀಯ ಪೊಲೀಸರು ಹಾಗೂ ಸಂಚಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇನ್ನು ಬೆಂಕಿಯ ಕೆನ್ನಾಲಿಗೆ ಹೆಚ್ಚಾಗುತ್ತಿದ್ದಂತೆಯೇ ಪುರಸಭಾ ಅಧಿಕಾರಿಗಳು ಕೂಡ ಸರಿಯಾದ ಸಮಯಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗೆ ಕರೆ ಮಾಡದಿರುವುದು ಬೇಸರದ ಸಂಗತಿ. ಜೊತೆಗೆ ಇಂತಹ ಅವಘಡಗಳು ಸಂಭವಿಸುವ ಸಂದರ್ಭದಲ್ಲಿ ಕೇವಲ ಒಂದೇ ಒಂದು ಅಗ್ನಿಶಾಮಕ ವಾಹನ ತಾಲೂಕಿನಲ್ಲಿ ಇರುವುದಕ್ಕೆ ಸ್ಥಳೀಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡರೂ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೊತೆಗೆ ಸಕಲೇಶಪುರ ನಗರ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Feb 17, 2020
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ ಮೇಲೆ ಹಲ್ಲೆ ಮಾಡಿರುವ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Sep 09, 2019
ಹಾಸನ: ಕೋಮುವಾದಿ ಪಕ್ಷದ ವಿಷಜಂತುವಾಗಿರುವ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಪತ್ರಿಕೆ, ಅಚ್ಚುಮೊಳೆ ಜೋಡಿಸಿ ಮುದ್ರಣ, ಗಣಕೀಕೃತ ಪತ್ರಿಕೆ, ಮುದ್ರಣ ಮಾಧ್ಯಮ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂಬಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ಪತ್ರಕರ್ತರೇ ಕಟ್ಟಿರುವ ಈ ಸುದ್ದಿ ವಾಹಿನಿಯನ್ನು ತಾವು ಬೆಳೆಸುತ್ತಿರಾ. . ? ಹರಸುತ್ತಿರಾ. . . ? ಕೈ ಹಿಡಿಯುತ್ತೀರಾ. . ? ಎಂಬ ನಂಬಿಕೆ ನಮ್ಮದು. www.kondinews.com ಕ್ಲಿಕ್ ಮಾಡಿ, ಲೈಕ್ ಮಾಡಿ. . .  ಶೇರ್ ಮಾಡಿ. . . ಸಬ್ಸ್ಕ್ರೈಬ್ ಮಾಡಿರಿ.. . 

ಸಂಪಾದಕ, ಕೊಂಡಿನ್ಯೂಸ್.

Newsletter

Subscribe with us your email
Top