ಹಾಸನ: ಆಹಾರದ ಚೀಲಗಳನ್ನು ...
ಹಾಸನ: ಸುಖಾ ಸುಮ್ಮನೆ ನಮ್ಮೂರಿನ
Hassan: ಜನತಾ ಕರ್ಪ್ಯೂ ಇಂದ ...
ಬೆಂಗಳೂರು: ಕೊರೊನಾ ಪ್ರಕರಣದ ...
ಬೆಂಗಳೂರು : ಕೋವಿಡ್ -19 ಪ್ರಕರಣದ
ದಕ್ಷಿಣ ಕನ್ನಡ:
ನವದೆಹಲಿ: ಹೆಮ್ಮಾರಿ ಕೊರೊನಾ ...
ಹಾಸನ/ಶ್ರವಣಬೆಳಗೊಳ: ಚಾಲಕನ ...
ಹುಬ್ಬಳಿ: ಕೆಲವು ವಾಹಿನಿಗಳ ವರದಿ
ಹಾಸನ/ಅರಸೀಕೆರೆ: ನಾಡಿನ ...
ತುಮಕೂರು: ಈಜಲು ತೆರಳಿದ ವೇಳೆ ...
ಕೊಡಗು: ವಿದೇಶಿ ಮಹಿಳೆಯೊಬ್ಬರು ...
ತುಮಕೂರು: ಸಚಿವ ಬಿ.ಸಿ.ಪಾಟೀಲ್ ...
 ಹಾಸನ:ಬಸ್ ನಿಲ್ದಾಣದ ಸ್ಪೀಡ್ ...
ಕೋಲಾರ : ಮಾರಕಾಸ್ತ್ರಗಳಿಂದ ಯುವಕನ
ಹಾಸನ: ಜಮೀನಿನ ವಿಚಾರಕ್ಕೆ ...
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ
ಚನ್ನರಾಯಪಟ್ಟಣ: ಪಟ್ಟಣದ ...
ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ತಾಯಿ.

 ಹಾಸನ:ಬಸ್ ನಿಲ್ದಾಣದ ಸ್ಪೀಡ್ ಬ್ರೇಕರ್ ಮೇಲೆ ಜಂಪ್ ಮಾಡಿದ ಹಿನ್ನೆಲೆಯಲ್ಲಿ ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ ಘಟನೆ ಹಾಸನ ನಗರದ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಡಿಕೇರಿಯಿಂದ ಹಾಸನ ಮಾರ್ಗವಾಗಿ ಹುಬ್ಬಳಿ ವಿಭಾಗದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಅರಸೀಕೆರೆಗೆ ಹೊರಟಿದ್ದ ನಾಜಿಯಾ (ಹೆಸರು ಬದಲಾಯಿಸಲಾಗಿದೆ) ಎಂಬ ಗರ್ಭಿಣಿ ಪ್ರಯಾಣ ಮಾಡುತ್ತಿದ್ದು, ಹಾಸನದ ಹೊಸ ಬಸ್ ನಿಲ್ದಾಣದಲ್ಲಿ ಹಾಕಲಾಗಿರುವ ಅತಿ ವೇಗ ನಿಯಂತ್ರಕದ ಮೇಲೆ ನಿಧಾನವಾಗಿ ಚಲಿಸದೆ ಅತಿ ವೇಗವಾಗಿ ಬಸ್ಸನ್ನ ಚಲಾಯಿಸಿದ ಚಾಲಕನ ನಿರ್ಲಕ್ಷದಿಂದ ಇಂಥದೊಂದು ಘಟನೆ ಸಂಭವಿಸಿದೆ.

ಬಸ್ ನಿಲ್ದಾಣದಲ್ಲಿರುವ 11, 8, 6 ಮತ್ತು 3 ನೇ ಪ್ಲಾಟ್ ಫಾರಂ ನ ತಿರುವಿನಲ್ಲಿ 4 ವೇಗ ನಿಯಂತ್ರಕಗಳ ಮೇಲೆ ಅತಿ ವೇಗವಾಗಿ ವಾಹನ ಚಲಾಯಿಸಿದ ಹಿನ್ನೆಲೆಯಲ್ಲಿ ನಾಜಿ಼ಯಾಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸ್ಥಳೀಯರು ತುರ್ತು ಚಿಕಿತ್ಸಾ ವಾಹನಕ್ಕೆ ಕರೆಮಾಡಿದ್ದರಿಂದ ತಕ್ಷಣ ಆಂಬುಲೆನ್ಸ್ ಆಗಮಿಸಿದ್ದು ಗರ್ಭಿಣಿ ಮಹಿಳೆಯನ್ನು ಬಸ್ಸಿನಿಂದ ತುರ್ತು ವಾಹನಕ್ಕೆ ವರ್ಗಾಯಿಸುವಷ್ಟರಲ್ಲಿ ಬಸ್ಸಿನಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ.

ಇನ್ನು ಚಾಲಕರು ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಭರದಲ್ಲಿ ಅಥವಾ ಸಮಯ ಉಳಿತಾಯದ ಹಿನ್ನೆಲೆಯಲ್ಲಿ ಅತಿ ವೇಗ ನಿಯಂತ್ರಣ ನಿರ್ಮಾಣ ಮಾಡಿದ ಸ್ಥಳದಲ್ಲಿ ಏಕಾಏಕಿ ಚಲಾಯಿಸುವುದರಿಂದ ಸಾಕಷ್ಟು ಅವಘಡಗಳು ಸಂಭವಿಸುತ್ತವೆ.

2016ರಲ್ಲಿ ಹಾಸನದಿಂದ ಅರಸೀಕೆರೆ ಮಾರ್ಗವಾಗಿ ಹೇಳುತ್ತಿದ್ದ ಮಹಿಳೆಯೊಬ್ಬರಿಗೆ ಬಸ್ಸಿನಲ್ಲಿಯೇ ಹೆರಿಗೆಯಾದ ಪ್ರಕರಣ ಮಾಸುವ ಮುನ್ನವೇ ಈಗ ಮತ್ತೊಂದು ಘಟನೆ ಸಂಭವಿಸುವುದು ನಿಜಕ್ಕೂ ಕೆಎಸ್ಆರ್ಟಿಸಿ ಸಂಸ್ಥೆಯ ಮೇಲೆ ಸಾರ್ವಜನಿಕರು ಆಕ್ರೋಶವನ್ನು ವ್ಯಕ್ತಪಡಿಸುವಂತೆ ಮಾಡಿದೆ.

ಇನ್ನು ಇಂತಹ ಘಟನೆ ಸಂಭವಿಸಿದ ಹಿನ್ನೆಲೆಯಲ್ಲಿ ತಾಯಿ ಮತ್ತು ಮಗು ಇಬ್ಬರೂ ಕೂಡ ಆರೋಗ್ಯವಾಗಿದ್ದು, ಹಾಸನದ ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Share this article

About author

Kondi News

Email This email address is being protected from spambots. You need JavaScript enabled to view it.

Leave a comment

Make sure you enter the (*) required information where indicated. HTML code is not allowed.

Media News

  • Latest
  • Most popular
  • Trending
  • Most commented
Post by Kondi News
- Mar 29, 2020
ಹಾಸನ: ಆಹಾರದ ಚೀಲಗಳನ್ನು ಸಾಗಿಸುತ್ತಿದ್ದೇವೆ ಎಂದು ಕೂಲಿ ...
Post by Kondi News
- Dec 20, 2019
ಹಾಸನ: ಒಬ್ಬ ಮನುಷ್ಯ ಎಷ್ಟು ವರ್ಷಗಳು ಬದುಕುತ್ತಾನೆ ...
Post by Kondi News
- Feb 17, 2020
ತುಮಕೂರು:ಪರಿಸರ ಸಂರಕ್ಷಣೆ ಬಗ್ಗೆ ಜಾಗೃತಿ ಹಾಗೂ ...
Has no content to show!

About Us

ಕನ್ನಡ ಪತ್ರಿಕೋದ್ಯಮವು ಕಾಲಕ್ಕೆ ತಕ್ಕಂತೆ ಬದಲಾಗುತ್ತಿದೆ. ಹಿಂದೆ ಗೋಡೆ ಬರಹದ ಮೇಲೆ, ಕೈ ಬರಹದ ಮೂಲಕ, ನಂತರ ಅಚ್ಚುಮೊಳೆ ಜೋಡಿಸಿ ಪತ್ರಿಕೆ ಮುದ್ರಣ ಮಾಡುತ್ತಿದ್ದ ಕಾಲ ಸರಿದು, ಗಣಕೀಕೃತ ಪತ್ರಿಕೆ ದಶಕಗಳ ಕಾಲ ಆಕ್ರಮಣ ಮಾಡಿಕೊಂಡಿತ್ತು. ತಂತ್ರಜ್ಞಾನ ಬದಲಾವಣೆಯಾದಂತೆ ಮಾಧ್ಯಮಗಳು ಬದಲಾವಣೆಯಾಗುತ್ತಾ ಮುದ್ರಣ ಮಾಧ್ಯಮವನ್ನ ಹಿಂದಿಕ್ಕೂವ ಭರದಲ್ಲಿ ದೃಶ್ಯ ಮಾಧ್ಯಮ ಕಾಲಿಟ್ಟರೂ ಅದಕ್ಕೂ ಮೀರಿದ ತಂತ್ರಜ್ಞಾನ ಬದಲಾಗಿ ಮುದ್ರಣ ಮಾಧ್ಯಮ ಮತ್ತು ದೃಶ್ಯಮಾಧ್ಯಮಗಳನ್ನ ಸರಿಸುತ್ತ ಮತ್ತೊಂದು ಮಾಧ್ಯಮ ಸಾಗಿದೆ. ಮಾಧ್ಯಮದ ತಂತ್ರಜ್ಞಾನ ಬದಲಾದಂತೆ, ಅದೇ ರೀತಿ ಜನರ ಸುದ್ದಿ ಓದುವ ವಿಧಾನವೂ ಕೂಡ ಬದಲಾಗಿದೆ. ಇಂದು ಲಕ್ಷಾಂತರ ಜನ ತಮ್ಮ ಅಂಗೈಯಲ್ಲೇ ಸುದ್ದಿ ಓದುತ್ತಿದ್ದಾರೆ. ಹಾಗಂತ ಪತ್ರಿಕೆಗಳು ತೆರೆಮರೆಗೆ ಸರಿಯುತ್ತಿದೆ ಎಂದಲ್ಲ. ಕಾಲಕ್ಕೆ ತಕ್ಕಂತೆ ಬದಲಾಗಬೇಕು ಕಾರಣ ಬದಲಾವಣೆ ಜಗದ ನಿಯಮ. ಇದಕ್ಕೆ ಸಾಕ್ಷಿಯೆಂಬಂತೆ ಕೇವಲ 5 ವರ್ಷಗಳ ಹಿಂದೆ ಪ್ರಾರಂಭವಾದ ಕೊಂಡಿನ್ಯೂಸ್ 6 ಲಕ್ಷಕ್ಕೂ ಅಧಿಕ ವೀಕ್ಷಕರ ಮನಸೊರೆಗೊಂಡಿರುವುದು ತಮಗೆಲ್ಲಾ ತಿಳಿದಿರುವ ಸಂಗತಿಯಾಗಿದೆ. 5ನೇ ವರ್ಷದ ವರ್ಷಾಚರಣೆಯ ಸಂದರ್ಭದಲ್ಲಿ "ಹಾಸನಾಂಬ ವಿಶೇಷಾಂಕ" ಎಂಬ ಶೀರ್ಷಿಕೆಯಡಿ ವಿಶೇಷ ಸಂಚಿಕೆಯನ್ನ ಹೊರತಂದು ಮೆಚ್ಚುಗೆಗೆ ಪಾತ್ರವಾಗಿದ್ದನ್ನ ತಮಗೆ ಹೇಳಬೇಕಿಲ್ಲ ಎಂದುಕೊಂಡಿದ್ದೇವೆ. ಅದರ ಮುಂದುವರೆದ ಭಾಗವಾಗಿ ಜನರ ಅಭಿಲಾಷೆಯಂತೆ ಕೊಂಡಿ ನ್ಯೂಸ್ ಹಾಸನ ಮಾತ್ರವಲ್ಲದೇ ಇಂದಿನಿಂದ ತುಮಕೂರು, ಬೆಂಗಳೂರು ಚಾಮರಾಜನಗರ, ಕೋಲಾರ, ಮಂಡ್ಯ, ಕೊಡಗು, ರಾಮನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೂ ವಿಸ್ತರಿಸುವ ಮೂಲಕ ಪ್ರಾದೇಶಿಕ ಅಂತರ್ಜಾಲ ವಾಹಿನಿಯಾಗಿ ಹೊರಹೊಮ್ಮುತ್ತಿದೆ. ವಿವಿಧ ಜಿಲ್ಲೆಗಳ ಪತ್ರಕರ್ತರೇ ಕಟ್ಟಿರುವ ಸುದ್ದಿ ವಾಹಿನಿಯು ತಮಗೆ ಖಂಡಿತ ಸನಿಹವಾಗುತ್ತದೆ ಎಂಬುದರಲ್ಲಿ ಎರಡು ಮಾತಿಲ್ಲ. ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಂಡು ತಮ್ಮ ಅಭಿರುಚಿಗೆ ತಕ್ಕ ಸುದ್ದಿಗಳನ್ನ ಕೊಡುವಲ್ಲಿ ಖಂಡಿತ ಸಫಲತೆ ಕಾಣುತ್ತೇವೆ. ತಮ್ಮ ಬೆಂಬಲ, ಸಹಕಾರ ಸದಾ ಹೀಗೆ ಇರಲಿ....ಎಂಬ ಆಶಯ ನಮ್ಮದು.   www.kondinews.com 

  • ಸಂಪಾದಕ, ಕೊಂಡಿನ್ಯೂಸ್. 

Newsletter

Subscribe with us your email
Top